TSK

TSK · ಙ್ಞಾನೋಕ್ತಿಗಳು 11:4

Treasury of Scripture Knowledge references in Kannada KJV.

Back to passage

ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.

ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.

ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.

ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?

ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?

ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).