TSK

TSK · ಙ್ಞಾನೋಕ್ತಿಗಳು 12:28

Treasury of Scripture Knowledge references in Kannada KJV.

Back to passage

ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.

ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.

ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.

ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.

ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.

ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.

ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.