TSK

TSK · ಙ್ಞಾನೋಕ್ತಿಗಳು 12:8

Treasury of Scripture Knowledge references in Kannada KJV.

Back to passage

ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.

ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.

ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.

ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.

ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.

ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.

ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?

ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.