TSK

TSK · ಙ್ಞಾನೋಕ್ತಿಗಳು 14:34

Treasury of Scripture Knowledge references in Kannada KJV.

Back to passage

ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.

ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್‌ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.

ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.

ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.