TSK

TSK · ಙ್ಞಾನೋಕ್ತಿಗಳು 15:5

Treasury of Scripture Knowledge references in Kannada KJV.

Back to passage

ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.

ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.

ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.

ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.

ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.

ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.

ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.

ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.