TSK

TSK · ಙ್ಞಾನೋಕ್ತಿಗಳು 15:7

Treasury of Scripture Knowledge references in Kannada KJV.

Back to passage

ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.

ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.

ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.

ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.

ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.

ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.

ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.

ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?

ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.

ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.