TSK

TSK · ಙ್ಞಾನೋಕ್ತಿಗಳು 19:9

Treasury of Scripture Knowledge references in Kannada KJV.

Back to passage

ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.

ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.

ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣ

ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.

ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.