TSK

TSK · ಙ್ಞಾನೋಕ್ತಿಗಳು 23:32

Treasury of Scripture Knowledge references in Kannada KJV.

Back to passage

ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.

ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.

ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.

ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.

ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.

ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.