TSK

TSK · ಙ್ಞಾನೋಕ್ತಿಗಳು 23:35

Treasury of Scripture Knowledge references in Kannada KJV.

Back to passage

ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.

ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.

ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.

ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.