TSK

TSK · ಙ್ಞಾನೋಕ್ತಿಗಳು 27:1

Treasury of Scripture Knowledge references in Kannada KJV.

Back to passage

ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್‌ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.

ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.

ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?

ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.

ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.