TSK

TSK · ಙ್ಞಾನೋಕ್ತಿಗಳು 27:17

Treasury of Scripture Knowledge references in Kannada KJV.

Back to passage

ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.

ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು.

ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.

ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.

ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.

ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.

ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.

ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.