TSK

TSK · ಙ್ಞಾನೋಕ್ತಿಗಳು 28:16

Treasury of Scripture Knowledge references in Kannada KJV.

Back to passage

ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--

ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.

ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.

ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.

ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.