TSK

TSK · ಙ್ಞಾನೋಕ್ತಿಗಳು 3:33

Treasury of Scripture Knowledge references in Kannada KJV.

Back to passage

ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ

ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.

ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.

ಕರ್ತನ ಮಂಜೂ ಷವು ಗತ್‌ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.

ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.

ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.

ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.

ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.

ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.