TSK

TSK · ಙ್ಞಾನೋಕ್ತಿಗಳು 31:25

Treasury of Scripture Knowledge references in Kannada KJV.

Back to passage

ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.

ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.

ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.

ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.

ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.

ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.