TSK

TSK · ಙ್ಞಾನೋಕ್ತಿಗಳು 5:14

Treasury of Scripture Knowledge references in Kannada KJV.

Back to passage

ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು.

ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.

ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.

ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.