TSK

TSK · ಙ್ಞಾನೋಕ್ತಿಗಳು 6:16

Treasury of Scripture Knowledge references in Kannada KJV.

Back to passage

ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.

ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.

ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.

ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.

ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.

ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.

ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.

ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.

ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ.

ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.

ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.

ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.

ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.