TSK

TSK · 1 ಪೂರ್ವಕಾಲವೃತ್ತಾ 1:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.

¶ ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು.

¶ ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’

ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆಗೆದರು.

ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,

ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.

ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.