ಆದಿಕಾಂಡ 16:11
TSK
ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.
TSK
Treasury of Scripture Knowledge references in ಕನ್ನಡ IRV.
ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.
¶ ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
¶ ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು,
¶ ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.