TSK

TSK · 1 ಪೂರ್ವಕಾಲವೃತ್ತಾ 1:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.

¶ ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.

ನೋಹನು ಒಂಭೈನೂರ ಐವತ್ತು ವರ್ಷ ಬದುಕಿ ಸತ್ತನು.

“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.

‹ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು.›

‹ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.›

ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.