ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
TSK
TSK · 1 ಪೂರ್ವಕಾಲವೃತ್ತಾ 10:9
Treasury of Scripture Knowledge references in ಕನ್ನಡ IRV.
1 ಸಮುವೇಲನು 31:9
TSK
ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು, ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿ ತಂದಾರು” ಎಂದು ಹೇಳಲು ಅವನು ಹೆದರಿ ಹಿಂಜರಿದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು, ಅದರ ಮೇಲೆ ಬಿದ್ದನು.
ದಾನಿಯೇಲನು 5:23
TSK
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.