¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
TSK
TSK · 1 ಪೂರ್ವಕಾಲವೃತ್ತಾ 11:10
Treasury of Scripture Knowledge references in ಕನ್ನಡ IRV.
¶ ಅಬ್ನೇರನು ಇಸ್ರಾಯೇಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮೊದಲು ಅಪೇಕ್ಷಿಸಿದಂತೆಯೇ ಈಗ ಮಾಡಿರಿ.
¶ ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.
ಯುದ್ಧವೀರರೂ, ಸೇನಾಧಿಪತಿಗಳೂ ಆದ ಇವರೆಲ್ಲರೂ ಸುಲಿಗೆ ಗುಂಪುಗಳಿಗೆ ವಿರೋಧವಾಗಿ ದಾವೀದನಿಗೆ ಸಹಾಯಮಾಡುವವರಾದರು.
¶ ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.
¶ ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.