TSK

TSK · 1 ಪೂರ್ವಕಾಲವೃತ್ತಾ 11:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು.

ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.

¶ ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.

ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?