TSK

TSK · 1 ಪೂರ್ವಕಾಲವೃತ್ತಾ 12:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.

ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು

ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.

ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.

¶ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು, “ನೀನು ಸಮಾಧಾನದಿಂದ ಬಂದಿರುವೆಯೋ?” ಎಂದು ಕೇಳಿದಳು. ಅವನು, “ಹೌದು ಸಮಾಧಾನದಿಂದ ಬಂದೆನು” ಎಂದನು.

¶ ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.

ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.

ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.

¶ ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.

¶ ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.