TSK

TSK · 1 ಪೂರ್ವಕಾಲವೃತ್ತಾ 13:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.

¶ ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು.

ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ” ಎಂದು ಉತ್ತರ ಕೊಟ್ಟನು.

ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.

ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.