ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.
TSK
TSK · 1 ಪೂರ್ವಕಾಲವೃತ್ತಾ 13:5
Treasury of Scripture Knowledge references in ಕನ್ನಡ IRV.
ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು.
¶ ಮಂಜೂಷವು ಕಿರ್ಯಾತ್ಯಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು.
ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.
ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.