TSK

TSK · 1 ಪೂರ್ವಕಾಲವೃತ್ತಾ 14:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.

ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.

ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.