ಅಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
TSK
TSK · 1 ಪೂರ್ವಕಾಲವೃತ್ತಾ 14:4
Treasury of Scripture Knowledge references in ಕನ್ನಡ IRV.
¶ ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೊಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.
ಆಗ ಆಕೆಯು, “ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ ನನ್ನ ತರುವಾಯ ನನ್ನ ಮಗನಾದ ಸೊಲೊಮೋನನು ಅರಸನಾಗಬೇಕು. ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂಬುದಾಗಿ ಹೇಳಿದ್ದೆಯಲ್ಲಾ.
ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.
ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.
ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.
ಎಲಿಯಕೀಮನು ಮೆಲೆಯಾನ ಮಗನು; ಮೆಲೆಯಾನು ಮೆನ್ನನ ಮಗನು; ಮೆನ್ನನು ಮತ್ತಾಥನ ಮಗನು; ಮತ್ತಾಥನು ನಾಥಾನನ ಮಗನು; ನಾಥಾನನು ದಾವೀದನ ಮಗನು;