2 ಸಮುವೇಲನು 6:17
TSK
ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
TSK
Treasury of Scripture Knowledge references in ಕನ್ನಡ IRV.
ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.
¶ ಲೇವಿಯ ಮಕ್ಕಳು ಗೇರ್ಷೋಮ್, ಕೆಹಾತ್, ಮೆರಾರೀ.
ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.
ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.
ಯಾಜಕರೂ, ಲೇವಿಯರೂ ಮತ್ತು ಸೆರೆಯಿಂದ ಹಿಂತಿರುಗಿ ಬಂದ ಬೇರೆ ಇಸ್ರಾಯೇಲರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.