¶ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
TSK
TSK · 1 ಪೂರ್ವಕಾಲವೃತ್ತಾ 16:12
Treasury of Scripture Knowledge references in ಕನ್ನಡ IRV.
ವಿಮೋಚನಕಾಂಡ 13:3
TSK
“ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
ಕೀರ್ತನೆಗಳು 19:9
TSK
ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.
ಕೀರ್ತನೆಗಳು 78:43
TSK
ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.
ಕೀರ್ತನೆಗಳು 111:4
TSK
ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.
ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.
ಯೆಹೋವನೇ, ನೀನು ನೀತಿಸ್ವರೂಪನು, ನಿನ್ನ ವಿಧಿಗಳು ನ್ಯಾಯವಾಗಿವೆ.
ಪ್ರಕಟನೆ 16:7
TSK
ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.