ಆದಿಕಾಂಡ 17:7
TSK
ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
TSK
Treasury of Scripture Knowledge references in ಕನ್ನಡ IRV.
ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,
ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.
ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.