TSK

TSK · 1 ಪೂರ್ವಕಾಲವೃತ್ತಾ 16:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.

ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.

ನೀನು ಬೆಳಿಗ್ಗೆ ಫರೋಹನ ಬಳಿಗೆ ಹೋಗು, ಅವನು ನೀರಿನ ಬಳಿಗೆ ಇಳಿದು ಬರುತ್ತಾನಲ್ಲಾ. ಸರ್ಪವಾಗಿ ಮಾರ್ಪಾಟುಮಾಡಿದ ಆ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಅವನನ್ನು ಎದುರುಗೊಳ್ಳುವುದಕ್ಕೆ ನೈಲ್ ನದಿ ತೀರದಲ್ಲಿ ನಿಂತುಕೊಂಡು ಅವನಿಗೆ ಹೀಗನ್ನಬೇಕು,

¶ ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!