TSK

TSK · 1 ಪೂರ್ವಕಾಲವೃತ್ತಾ 16:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?

ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?

ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.

ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.

ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.

ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.

ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.