ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
TSK
TSK · 1 ಪೂರ್ವಕಾಲವೃತ್ತಾ 16:27
Treasury of Scripture Knowledge references in ಕನ್ನಡ IRV.
ನೆಹೆಮಿಯ 8:10
TSK
ಕೀರ್ತನೆಗಳು 16:11
TSK
ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ಕೀರ್ತನೆಗಳು 28:7
TSK
ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
ಕೀರ್ತನೆಗಳು 63:2
TSK
ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.
ಯೆಹೆಜ್ಕೇಲನು 1:27
TSK
¶ ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.