TSK

TSK · 1 ಪೂರ್ವಕಾಲವೃತ್ತಾ 16:37

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.

ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.

ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.