TSK

TSK · 1 ಪೂರ್ವಕಾಲವೃತ್ತಾ 16:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.

“ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.

“ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.

ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು.

ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.

¶ ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,

ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು.

ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.

ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.

ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,

ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,