TSK

TSK · 1 ಪೂರ್ವಕಾಲವೃತ್ತಾ 17:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

¶ ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೊಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.

¶ ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.

ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.

ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.

ಆದರೆ ನೀನು ಆಲಯವನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸುವನು’ ಎಂದು ಹೇಳಿದನು.

ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;

¶ “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.

ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.