ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.
TSK
TSK · 1 ಪೂರ್ವಕಾಲವೃತ್ತಾ 17:16
Treasury of Scripture Knowledge references in ಕನ್ನಡ IRV.
ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು.
ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಎಂದನು.
¶ ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.
ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ