TSK

TSK · 1 ಪೂರ್ವಕಾಲವೃತ್ತಾ 17:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.

¶ ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.

ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.

ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.

ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.

ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.

ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.

ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.

ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?

‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.