TSK

TSK · 1 ಪೂರ್ವಕಾಲವೃತ್ತಾ 17:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.

ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.

ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.

ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.

ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”

¶ “‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.

ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.

ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.

ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.