TSK

TSK · 1 ಪೂರ್ವಕಾಲವೃತ್ತಾ 19:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.

ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.

ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?

ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,