TSK

TSK · 1 ಪೂರ್ವಕಾಲವೃತ್ತಾ 19:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆ ಹಾಗು ಆರೋನರಿಗೆ, “ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ” ಅಂದರು. “ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದು ಹೇಳಿದರು.

¶ ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.

¶ ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.

¶ ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.

¶ ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.

ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.

ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.

ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.

ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.

ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.