¶ ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
TSK
TSK · 1 ಪೂರ್ವಕಾಲವೃತ್ತಾ 20:1
Treasury of Scripture Knowledge references in ಕನ್ನಡ IRV.
¶ ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.
¶ ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು.
¶ ಎಲೀಷನು ಮರಣ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.
ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.
ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.
ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.