“ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.
TSK
TSK · 1 ಪೂರ್ವಕಾಲವೃತ್ತಾ 21:1
Treasury of Scripture Knowledge references in ಕನ್ನಡ IRV.
ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.
ಇವರೆಲ್ಲರು ಆಶೇರ್ಯರಲ್ಲಿ ಗೋತ್ರಪ್ರಧಾನರೂ, ಯುದ್ಧಪ್ರವೀಣರಾದ ರಣವೀರರೂ ಮತ್ತು ಶ್ರೇಷ್ಠ ನಾಯಕರೂ ಆಗಿದ್ದರು. ಇವರ ವಂಶಾವಳಿಯ ಪಟ್ಟಿಯ ಪ್ರಕಾರ ಯುದ್ಧ ಪ್ರವೀಣರಾದ ಭಟರ ಸಂಖ್ಯೆ ಇಪ್ಪತ್ತಾರು ಸಾವಿರ.
¶ ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು.
¶ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
¶ ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.
ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.
¶ ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.