TSK

TSK · 1 ಪೂರ್ವಕಾಲವೃತ್ತಾ 21:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.

ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.

¶ ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.

ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.

¶ “ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.

ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.

¶ ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.