TSK

TSK · 1 ಪೂರ್ವಕಾಲವೃತ್ತಾ 22:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.

ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತು ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು.

ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.

¶ ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.

ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.

ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,

ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು.

ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.