TSK

TSK · 1 ಪೂರ್ವಕಾಲವೃತ್ತಾ 23:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.

ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ” ಎಂದು ಹೇಳಿದನು.

ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.

ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.

ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.