“ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.
TSK
TSK · 1 ಪೂರ್ವಕಾಲವೃತ್ತಾ 23:24
Treasury of Scripture Knowledge references in ಕನ್ನಡ IRV.
¶ ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
“ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.
¶ ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
¶ ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.
ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.
ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.