TSK

TSK · 1 ಪೂರ್ವಕಾಲವೃತ್ತಾ 23:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.

ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.

ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು

ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.

ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.

ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.

ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು.

¶ ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟಿದ್ದನು. ಇವನು ಟೋಬೀಯನ ಸಂಬಂಧಿಕನಾಗಿದ್ದನು.

ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.

ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು.

¶ ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.