¶ ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ.
TSK
TSK · 1 ಪೂರ್ವಕಾಲವೃತ್ತಾ 25:2
Treasury of Scripture Knowledge references in ಕನ್ನಡ IRV.
ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.
ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.
¶ ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.
ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು.
ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.
ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.
ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.
ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.
ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.