TSK

TSK · 1 ಪೂರ್ವಕಾಲವೃತ್ತಾ 27:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.

¶ ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.

¶ ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.

ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.

¶ ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.

¶ ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.

ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.